ವಿದ್ಯಾರ್ಥಿವೇತನ

2014-15 ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ/ಫೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1000/-ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥವೇತನ ರಾಜ್ಯ ಸರ್ಕಾರದ ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ ಪ್ರೌಢಶಾಲೆ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ವಾರ್ಷಿಕ ರೂ.10,000/- ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇಲಾಖೆಯಲ್ಲಿ ಜಾರಿಯಲ್ಲಿದ್ದು. ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು. ಸದರಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಕ್ರಿಡಾಪಟು ಈ ಕೆಳಗಿನ ಅರ್ಹತೆಗಳನ್ನು ಹೋಂದಿರಬೇಕಾಗಿರುತ್ತದೆ. ಅರ್ಜಿಯನ್ನು ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಮೂಲಕ ಸಲ್ಲಿಸಲು ಕೋರಲಾಗಿದೆ.
  • ಅರ್ಜಿದಾರರು 2014-15 ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರಬೇಕು.
  • ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು ದಿನಾಂಕ 01.01.2014 ರ ನಂತರ ನಡೆಸಿದ ರಾಜ್ಯ ಮಟ್ಟದ ಸ್ಪರ್ದೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿರಬೇಕು ಅಂದರೆ ಕ್ರೀಡಾ ಪಂದ್ಯಾವಳಿಗಳಲ್ಲಿನ ದಿನಾಂಕ 01.01.2014 ರಿಂದ 31.012.2014 ರ ಸಾಧನೆಯನ್ನು ಮಾತ್ರ ಪರಿಗಣಿಸಲಾಗುವುದು.
  • ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ನಡೆಸಿದ ರಾಜ್ಯ ಮಟ್ಟದ ಪೈಕಾ ಗ್ರಾಮೀಣ ಕ್ರೀಡಾಕೂಟ ಹಾಗೂ ಮಹಿಳಾ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಲ್ಲಿ ಅಥವಾ ರಾಷ್ಟ್ರೀಯ ಗ್ರಾಮೀಣ/ ಮಹಿಳಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾ ಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.
  • ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಸ್ಕೂಲ್ ಗೇಮ್ಸ ಫೆಡರೇಷನ್ ಆಪ್ ಇಂಡಿಯಾ ಯೋಜನೆಯಡಿಯಲ್ಲಿ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಲ್ಲಿ ಅಥವಾ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.
  • ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ಸ್ಕಾಲರ್ ಷಿಪ್ ಮೊತ್ತಕ್ಕೆ ಮಾತ್ರ ಅರ್ಹರಿರುತ್ತಾರೆ.
  • ವಿದ್ಯಾರ್ಥಿ ವೇತನದ ಮೊತ್ತವನ್ನು ವಾರ್ಷಿಕ ರೂ,10,000.00ಗಳನ್ನು ಮಾತ್ರ ಮಂಜೂರು ಮಾಡಲಾಗುವುದು.
  • ಅರ್ಜಿಗಳನ್ನು ದಿನಾಂಕ 31.01.2011ರ ಒಳಗೆ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಇವರ ಕಛೇರಿಗೆ ತಲುಪುವಂತೆ ಕಳುಹಿಸಬೇಕು. ತಡವಾಗಿ ಬಂದ  ಅರ್ಜಿಗಳನ್ನು ಯಾವುದೇ  ಕಾರಣ ನೀಡದೇ ತಿರಸ್ಕರಿಸಲಾಗುವುದು ಮತ್ತು ಈ ಬಗ್ಗೆ ಪತ್ರ ವ್ಯವಹಾರವನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ.
  • ಆಯಾ ಜಿಲ್ಲೆಯ ಸಹಾಯಕ ನಿರ್ದೇಶಕರುಗಳು ಮೇಲೆ ವಿವರಿಸಿದ ಅಂಶಗಳನ್ನು ಗಮನದಲ್ಲಿಟ್ಟು ವೈಯುಕ್ತಿಕ  ಆಸಕ್ತಿ ವಹಿಸಿ ಅರ್ಹ ವಿದ್ಯಾರ್ಥಿಗಳ ಅರ್ಜಿಯನ್ನು ಪರಿಶೀಲಿಸಿ ಅರ್ಹ ಅರ್ಜಿಗಳನ್ನು ಮಾತ್ರ ಶಿಫಾರಸ್ಸು ಮಾಡಲು ಹಾಗೂ ಶಿಫಾರಸ್ಸು ಮಾಡಲಾದ ಕ್ರೀಡಾಪಟುಗಳಿಂದ ರೂ.10,000/- ಗಳಿಗೆ ಆಯಾ ಶಾಲೆಯ ಮುಖ್ಯೋಪಾಧ್ಯಾಯರ ಮುಖಾಂತರ ಮುಂಗಡ ರಸೀದಿಯನ್ನು ತಪ್ಪದೇ ಪಡೆದು ಕಳುಹಿಸಿಕೊಡುವಂತೆ ಸೂಚಿಸಲಾಗಿದೆ.
Feedback